ಮಂಡ್ಯ: ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಮೈಸೂರಿನ ಮೇಟಗಳ್ಳಿ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ನಿಸರ್ಗ ಮತ್ತು ನವೀನ್ ಇಬ್ಬರು ಸಂಬಂಧಿಕರಾಗಿದ್ದು, ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು.
ಆದರೆ ನವೆಂಬರ್ 20ರಂದು ನಿಸರ್ಗ ಬೇರೆ ಯುವಕನೊಂದಿಗೆ ಮದುವೆ ಮಾಡಲಾಗಿತ್ತು. ಇದರಿಂದ ಇಬ್ಬರೂ ಮನನೊಂದಿದ್ದರು ಎನ್ನಲಾಗಿದೆ. ಡಿಸೆಂಬರ್ 1ರ ನಂತರ ನವೀನ್ ಮತ್ತು ನಿಸರ್ಗ ಕಾಣೆಯಾಗಿದ್ದರು.
ಕೆಆರ್ಎಸ್ನ ನಾರ್ತ್ ಬ್ಯಾಂಕ್ನ ಮಿಲ್ಟ್ರಿಕ್ಯಾಂಪ್ ಬಳಿ ಇಬ್ಬರು ವೇಲ್ನಿಂದ ಕಟ್ಟಿಕೊಂಡು ಹಿನ್ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಪ್ರೇಮಿಗಳ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق