ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಪ್ರೇಮಿಗಳು

ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಪ್ರೇಮಿಗಳು

 


ಮೈಸೂರು: ಕಪಿಲಾ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಹೆಬ್ಬಸೂರು ಗ್ರಾಮದ 17 ವರ್ಷದ ಅಪ್ರಾಪ್ತೆಯ ಜೊತೆಗೆ ಚಾಮರಾಜನಗರದ ಸೋಮವಾರಪೇಟೆ ನಿವಾಸಿ ಅಭಿ (19) ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿ, ಕಾಲೇಜು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಕೆಲ ಸಮಯದಿಂದ ಪ್ರೀತಿಸುತ್ತಿದ್ದಾನೆ. ಈ ಪ್ರೀತಿಗೆ ಬಾಲಕಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದು, ದೂರ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. 

ಇದರಿಂದ ಮನನೊಂದ ಪ್ರೇಮಿಗಳು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ತೆಪ್ಪ ನಡೆಸುವ ಅಂಬಿಗರು ಯುವಕ ಹಾಗೂ ಯುವತಿಯನ್ನು ರಕ್ಷಿಸಿದ್ದಾರೆ.

ಈ ಬಗ್ಗೆ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

0 تعليقات

إرسال تعليق

Post a Comment (0)

أحدث أقدم