ಉಳ್ಳಾಲ: ನಗರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಭಾನುವಾರ ಸಂಜೆ ಕುತ್ತಾರ್‌ನಲ್ಲಿ ಅವರು ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೀದರ್‌ನ ಆನಂದ ನಗರದ ವಿಜಯಕುಮಾರ್ ಗಾಯಕವಾಡ್ ಪುತ್ರಿ ವೈಶಾಲಿ ಗಾಯಕ್‌ವಾಡ್ (25) ಮೃತ ವಿದ್ಯಾರ್ಥಿನಿ.
ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ. ವೈಯಕ್ತಿಕ ಕಾರಣಗಳ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.
ಗೆಳತಿ ಜೊತೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ ವೈಶಾಲಿ ಅವರು ಭಾನುವಾರ ಸಂಜೆ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق