ಮಂಗಳೂರು: ಇತ್ತೀಚೆಗೆ ವಾಮಂಜೂರು ಠಾಣಾ ವ್ಯಾಪ್ತಿಯ ನೀರುಮಾರ್ಗದಲ್ಲಿ ಹಲ್ಲೆ ಪ್ರಕರಣವೊಂದರಲ್ಲಿ ಕೇಸು ಪೊಲೀಸ್ ಠಾಣೆಯಲ್ಲಿ ದಾಖಲಾಗಿ ಅಪರಾಧಿಗಳನ್ನು ಬಂಧಿಸಿರುವ ಪೊಲೀಸರು ಹಲವು ನಿರಪರಾಧಿಗಳನ್ನು ಕೂಡ ವಶಕ್ಕೆ ಪಡೆದುಕೊಂಡಿದ್ದರು.
ಮಾಹಿತಿಯನ್ನು ಪಡೆದ ಶಾಸಕ ಡಾ.ಭರತ್ ಶೆಟ್ಟಿ ವೈಯವರು ಪೊಲೀಸ್ ಠಾಣೆಗೆ ತೆರಳಿ ಖುದ್ದಾಗಿ ಅಧಿಕಾರಿಗಳೊಂದಿಗೆ ಮಾತುಕತೆ ಮಾಡಿ ಅಪರಾಧಿಗಳ ವಿಚಾರಣೆಗೆ ಯಾರೂ ಅಡ್ಡಿಪಡಿಸುವುದಿಲ್ಲ; ಆದರೆ ವಿನಾಕಾರಣ ನಿರಪರಾಧಿಗಳಿಗೆ ಶಿಕ್ಷೆಯಾಗುವುದು ಸರಿಯಲ್ಲ ಎಂದರಲ್ಲದೆ ಈ ಪ್ರಕರಣದಲ್ಲಿ ಭಾಗಿಯಾಗದ ಯುವಕರ ಮೇಲೆ ಪ್ರಕರಣ ದಾಖಲಾಗದಂತೆ ನೋಡಿಕೊಂಡು ಶಾಸಕರು ಬಿಡಿಸಿ ಕರೆತಂದಿದ್ದಾರೆ.
ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಹಿಂದೂ ಜಾಗರಣ ವೇದಿಕೆಯ ಹರೀಶ್ ಮಟ್ಟಿ ಜೊತೆಗಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق