ಈ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯ ಮಾರಾಟವನ್ನು ಕೂಡ ನಿಷೇಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ಮುಕ್ತದಿನಗಳೆಂದು ಘೋಷಿಸಿ, ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ತಿಳಿಸಿದ್ದಾರೆ.
"ಅಷ್ಟೇ ಅಲ್ಲದೆ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಹಾಗೂ ಮಾರಾಟವನ್ನು ನಿಷೇಧಿಸಿ " ಎಂದು ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
إرسال تعليق