ವಿಜಯಪುರ : ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಪ್ರದೀಪ ಎಂಟಮಾನ ಎಂಬವರನ್ನು ದುರ್ಷ್ಕಮಿಗಳು ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸ್ನೇಹಿತರೊಂದಿಗೆ ತೆರಳಿದ್ದ ಪ್ರದೀಪ ಮೇಲೆ ನಾಲ್ಕೈದು ದುಷ್ಕರ್ಮಿಗಳಿಂದ ದಾಳಿ ಮಾಡಿ, ಕಲ್ಲು ಹಾಗೂ ಬಡಿಗೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ದಾಳಿಯ ಪರಿಣಾಮ ಪ್ರದೀಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಬಗ್ಗೆ ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
إرسال تعليق