ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಘಾನಾದಿಂದ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಪತ್ತೆ, ಡಿ.ಸಿ ತುರ್ತು ಸಭೆ

ಘಾನಾದಿಂದ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಪತ್ತೆ, ಡಿ.ಸಿ ತುರ್ತು ಸಭೆ

ಮಂಗಳೂರು: ಹೈರಿಸ್ಕ್ ದೇಶವಾದ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಆರ್.ಟಿ.ಪಿ.ಸಿ.ಆರ್ ತಪಾಸಣೆ ವೇಳೆ ಕೊರೋನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ತುರ್ತಾಗಿ ಸಭೆ ನಡೆಸಿದರು.

ಪ್ರಯಾಣಿಕರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ‌. ಈ ಪಾಸಿಟಿವ್ ಬಂದ ರೋಗಿಗಳ ಗಂಟಲು ದ್ರವ ಮಾದರಿಯನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ಈಗಾಗಲೇ ಕಳುಹಿಸಿಕೊಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಮಂಗಳೂರು ವಿಮಾನನಿಲ್ದಾಣ ಮುಖ್ಯಸ್ಥರು, ಆರೋಗ್ಯಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ , ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.

0 تعليقات

إرسال تعليق

Post a Comment (0)

أحدث أقدم