ನಟ ಪ್ರಜ್ವಲ್ ದೇವರಾಜ್ ಇದೀಗ ಹೊಸ ಸಿನಿಮಾದ ಸಿದ್ಧತೆಯಲ್ಲಿದ್ದಾರೆ. 'ಮಾಫಿಯಾ' ಚಿತ್ರದಲ್ಲಿ ಇವರು ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಇವರು ಕೂದಲಿಗೆ ಕತ್ತರಿ ಹಾಕಿ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ ಅವರು ತಮ್ಮ ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ್ದಾರೆ. ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರಿಗೆ ಚಿಕಿತ್ಸೆ ಮಾಡುವುದರಿಂದ ಕೂದಲು ಉದುರುತ್ತದೆ. ಅಂತವರಿಗೆ ಸಹಾಯ ಆಗಲಿ ಎಂದು ಹಲವರು ಕೇಶ ದಾನ ಮಾಡುತ್ತಾರೆ. ಇವರು ಕೂಡ ಇಂತಹ ಉತ್ತಮ ಕಾರ್ಯ ಮಾಡುವುದರ ಮೂಲಕ ಮಾದರಿಯೆನಿಸಿದ್ದಾರೆ. ನಟ ಧ್ರುವ ಸರ್ಜಾ ಕೂಡ ತಮ್ಮ ಕೂದಲನ್ನು ದಾನ ಮಾಡಿದ್ದರು.
إرسال تعليق