ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕ್ವಾಲಿಸ್ ಮತ್ತು ಲಾರಿ ಅಪಘಾತ; 6 ಮಂದಿ ಸಾವು, 6 ಮಂದಿಗೆ ಗಾಯ

ಕ್ವಾಲಿಸ್ ಮತ್ತು ಲಾರಿ ಅಪಘಾತ; 6 ಮಂದಿ ಸಾವು, 6 ಮಂದಿಗೆ ಗಾಯ

 


ಹೈದರಾಬಾದ್ : ಕಾಮರೆಡ್ಡಿ ಜಿಲ್ಲೆಯ ಬಿಚ್ಚುಂದಾ ಮಂಡಲದ ಸಂಗರೆಡ್ಡಿ-ನಾಂದೇಡ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯೊಂದು ನಡೆದಿದೆ. 

ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇತರ ಆರು ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ನಿಜಾಮಾಬಾದ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೊಯೊಟಾ ಕ್ವಾಲಿಸ್ ನಲ್ಲಿ 12 ಜನರು ಮಹಾರಾಷ್ಟ್ರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕ್ವಾಲಿಸ್ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




0 Comments

Post a Comment

Post a Comment (0)

Previous Post Next Post