ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಷ್ಟ್ರಕವಿ ಕುವೆಂಪು ಅವರ ಸೊಸೆ ನಿಧನ

ರಾಷ್ಟ್ರಕವಿ ಕುವೆಂಪು ಅವರ ಸೊಸೆ ನಿಧನ



ಬೆಂಗಳೂರು: ಕನ್ನಡದ ಅಸಾಧಾರಣ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಸೊಸೆಯಾಗಿರುವ ರಾಜೇಶ್ವರಿಯವರು ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಮೂರು ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ 84 ವರ್ಷ ವಯಸ್ಸಾಗಿತ್ತು. 

ಉತ್ತಮ ಲೇಖಕಿಯೂ ಆಗಿದ್ದ ರಾಜೇಶ್ವರಿ ತೇಜಸ್ವಿಯವರ ಮುದ್ರಣ ಕಂಡ ಐದು ಕೃತಿಗಳಲ್ಲಿ ' ನನ್ನ ತೇಜಸ್ವಿ' ಮೊದಲ ಕೃತಿಯಾಗಿದೆ. ಉತ್ತಮ ವ್ಯಕ್ತಿತ್ವದವರಾಗಿದ್ದ ಪೂರ್ಣಚಂದ್ರ ತೇಜಸ್ವಿ ಹಾಗೂ ರಾಜೇಶ್ವರಿ ತೇಜಸ್ವಿಯವರಿಗೆ ಸುಶ್ಮಿತಾ ಮತ್ತು ಈಶಾನ್ಯೆ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದು ಸಾಫ್ಟ್‌ವೇರ್ ಇಂಜಿನಿಯರ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬೆಂಗಳೂರಿನ ಪುತ್ರಿಯ ಮನೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು ಮೃತದೇಹವನ್ನು ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.


0 تعليقات

إرسال تعليق

Post a Comment (0)

أحدث أقدم