ಇಂದು ಸೂಪರ್ ಸ್ಟಾರ್ ರಜನಿಕಾಂತ್ ಗೆ ಹುಟ್ಟುಹಬ್ಬದ ಸಂಭ್ರಮ. ಇವರು 71 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಿನಿಮಂದಿ ಸೇರಿ ಅನೇಕ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.
ಬಾಲಿವುಡ್ ಮತ್ತು ದಕ್ಷಿಣ ಭಾರತದ ಸಿನಿಮಾ ಕ್ಷೇತ್ರಗಳಲ್ಲಿ ಪ್ರಸಿದ್ಧರಾಗಿರುವ ರಜನಿಕಾಂತ್ ರಜನಿ ಸರ್ ಎಂದೇ ಖ್ಯಾತಿಯಾಗಿದ್ದಾರೆ. ಇವರು ತಮ್ಮ ಉತ್ತಮ ನಟನೆಗೆ ಫಿಲ್ಮ್ ಫೇರ್, ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ, ಕಲೈಮಾಮಣಿ ಪ್ರಶಸ್ತಿ ಅಷ್ಟೇ ಅಲ್ಲದೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣಗಳನ್ನು ಪಡೆದಿದ್ದಾರೆ.
ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ಅಭಿನಯಿಸಿ ಸೌತ್ ಸೂಪರ್ ಸ್ಟಾರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವರ್ಷ ರಜನಿ ಪಾಲಿಗೆ ವಿಶೇಷವಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಕೂಡ ಲಭಿಸಿದೆ.
إرسال تعليق