ಬೆಂಗಳೂರು: ರಾಜ್ಯದ ಕೋವಿಡ್ ಸೋಂಕು ಹೆಚ್ಚಾದಲ್ಲಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ಅದು ಅನಗತ್ಯವೆಂದು ತಜ್ಞರು ಹೇಳಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಸತಿ ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಸೋಂಕು ಪ್ರಮಾಣ ವೀಕ್ಷಿಸಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಶಾಲೆಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಆನ್ಲೈನ್ ಕ್ಲಾಸ್ ಮಾಡಬೇಕೆಂಬ ಒತ್ತಾಯ ಪೋಷಕರಿಂದ ಕೇಳಿಬಂದಿದೆ.
ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ತಜ್ಞರ ವರದಿ ಪಡೆಯುತ್ತಿದ್ದೇವೆ.
ವರದಿ ಆಧರಿಸಿ ಮಕ್ಕಳ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Post a Comment