ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಾಣೆಮಂಗಳೂರು; ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ , ಗಂಭೀರ ಗಾಯ

ಪಾಣೆಮಂಗಳೂರು; ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ , ಗಂಭೀರ ಗಾಯ

 


ಬಂಟ್ವಾಳ: ಬಸ್ಸಿನಿಂದ ಇಳಿದು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಇಬ್ಬರು ಗಂಭೀರ ಗಾಯಗೊಂಡ ಘಟನೆಯೊಂದು ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.


ಮಹಮ್ಮದ್ ಸಲೀಂ ಹಾಗೂ ಸಿಂಚನ ಗಾಯಗೊಂಡ ವಿದ್ಯಾರ್ಥಿಗಳು.

ಸಜೀಪ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಬಸ್ ನಿಂದ ಇಳಿದು ಮನೆಗೆ ತೆರಳುವ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಬಸ್ ನಿಲ್ದಾಣದಿಂದ ಸ್ವಲ್ಪ ಮುಂದೆ ಚಾಲಕನ ಅಜಾಗರೂಕತೆಯಿಂದ ಕಾರು ವಿದ್ಯಾರ್ಥಿಗಳ ಮೇಲೆ ಹರಿದು ಬಳಿಕ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.


ಈ ಘಟನೆಯಿಂದ ವಿದ್ಯಾರ್ಥಿ ಮಹಮ್ಮದ್ ಸಲೀಂ ಗಂಭೀರ ವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಿಂಚನ ಎಂಬ ವಿದ್ಯಾರ್ಥಿನಿಗೂ ಗಾಯವಾಗಿದ್ದು ಅವಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಪ್ರಪಾತಕ್ಕೆ ಉರುಳಿದ ಕಾರನ್ನು ಕ್ರೇನ್ ಬಳಸಿ ಮೇಲಕ್ಕೆ ಎತ್ತಲಾಗಿದೆ.

ಕಾರು ಸಂಪೂರ್ಣ ಜಖಂ ಗೊಂಡಿದ್ದು, ಕಾರಿನಲ್ಲಿದ್ದ ಚಾಲಕ ಪ್ರಯಾಣಿಕರಿಗೆ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.



0 Comments

Post a Comment

Post a Comment (0)

Previous Post Next Post