ಬೆಂಗಳೂರು: ಮೆದುಳಿನಲ್ಲಿ ರಕ್ತಸ್ತ್ರಾವ ಉಂಟಾದ ಕಾರಣ ಹಿರಿಯ ನಟ ಶಿವರಾಂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನ ಹೊಸಕರೆ ಹಳ್ಳಿಗೆ ಕಾರಿನಲ್ಲಿ ಅವರು ಹೋಗುತ್ತಿದ್ದ ವೇಳೆ, ಈ ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ ಅವರು ಕಾರಿನಿಂದ ಬಿದ್ದ ಹಿನ್ನೆಲೆ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗಿದೆ.
84 ವರ್ಷದ ಹಿರಿಯ ನಟ ಶಿವರಾಮ್ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ.
ಇನ್ನೂ ಆಸ್ಪತ್ರೆ ಮೂಲಗಳ ಪ್ರಕಾರ ಅವರ ಮೆದುಳಿಗೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗಿದೆ.
إرسال تعليق