ಬೆಂಗಳೂರು; ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಇಂದು ನಿಧನ ಹೊಂದಿದ್ದಾರೆ.
ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮಿದುಳಿಗೆ ತೀವ್ರ ಹಾನಿಯಾಗಿ ಕೋಮಾದಲ್ಲಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. pic.twitter.com/U5X3ccsNoD
— Basavaraj S Bommai (@BSBommai) December 4, 2021
ನುಡಿನಮನ: ಮರೆಯಾದ ಕನ್ನಡ ಚಿತ್ರರಂಗದ ಮತ್ತೊಬ್ಬ ಹಿರಿಯಣ್ಣ; ಮೂರು ತಲೆಮಾರುಗಳ ಪೋಷಕ ಶಿವರಾಂ
Post a Comment