ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ

ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ

 


ಬೆಂಗಳೂರು; ಕನ್ನಡ ಚಿತ್ರರಂಗದ ಹಿರಿಯ ನಟ  ಶಿವರಾಂ ಇಂದು ನಿಧನ ಹೊಂದಿದ್ದಾರೆ.


ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಿದುಳಿಗೆ ತೀವ್ರ ಹಾನಿಯಾಗಿ ಕೋಮಾದಲ್ಲಿದ್ದರು.  ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.




ನುಡಿನಮನ: ಮರೆಯಾದ ಕನ್ನಡ ಚಿತ್ರರಂಗದ ಮತ್ತೊಬ್ಬ ಹಿರಿಯಣ್ಣ; ಮೂರು ತಲೆಮಾರುಗಳ ಪೋಷಕ ಶಿವರಾಂ 

0 تعليقات

إرسال تعليق

Post a Comment (0)

أحدث أقدم