ಬೆಂಗಳೂರು: ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೋಲೀಸರು ಏಳು ಜನರನ್ನು ಭಾನುವಾರ ಬಂಧಿಸಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿ ಛತ್ರಪತಿ ಮಹಾರಾಜರ ಪ್ರತಿಮೆಗೆ ಗುರುವಾರ ಮಧ್ಯರಾತ್ರಿ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಇದೇ ಸಂದರ್ಭದಲ್ಲಿ ಶನಿವಾರ ಬೆಳಗಿನ ಜಾವ ಕನಕದಾಸ ಕಾಲೋನಿಯಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೂಡ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ವಿಚಾರವಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಈ ಅಪರಾಧಕ್ಕೆ ಸಂಬಂಧಿಸಿದ 7 ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
إرسال تعليق