ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸುಳ್ಯ; ಬಸ್ ಮಾಲಕ ಆತ್ಮಹತ್ಯೆಗೆ ಶರಣು

ಸುಳ್ಯ; ಬಸ್ ಮಾಲಕ ಆತ್ಮಹತ್ಯೆಗೆ ಶರಣು



ಸುಳ್ಯ: ಇಲ್ಲಿನ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾರಾಯಣ ರೈ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ.

ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು ಸಹೋದರರನ್ನು ಅಗಲಿದ್ದಾರೆ.


0 Comments

Post a Comment

Post a Comment (0)

Previous Post Next Post