ವಿಜಯಪುರ: ಭಾರತೀಯ ಸೇನೆಯ ಯೋಧ ಮೇಲಾಧಿಕಾರಿಗಳ ಕಿರುಕುಳಕ್ಕೆ ಒಳಗಾಗಿ ಹೊಲದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಮುದ್ದೇಬಿಹಾಳ ಗ್ರಾಮದಲ್ಲಿ ನಡೆದಿದೆ.
ಹನುಮಂತ್ರಾಯಪ್ಪ ಹೂಗಾರ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ಯೋಧ. ಕಳೆದ 10 ವರ್ಷದಿಂದಲೇ ಭಾರತೀಯ ಸೇನೆಯಲ್ಲಿ ಜನರಲ್ ಡ್ಯೂಟಿ ಸೋಲ್ಜರ್ ಆಗಿಯೇ ಕೆಲಸ ಮಾಡುತ್ತಿದ್ದು, ಮೇಲಾಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎರಡು ದಿನದ ಹಿಂದೆ ಮುದ್ದೇಬಿಹಾಳ ತಾಲೂಕಿನ ಸರೂರು ಗ್ರಾಮಕ್ಕೆ ರಜೆ ಮೇಲೆ ಬಂದಿದ್ದ, ಆದರೆ ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದಿದ್ದರೆಂದು ಕುಟುಂಬದವರು ದೂರಿದ್ದಾರೆ.
ಮಗನ ಆತ್ಮಹತ್ಯೆ ವಿಷಯವನ್ನು ತಂದೆ ಶಿವಪ್ಪ ಹೂಗಾರ ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق