ಮಂಗಳೂರು: ಕಿರುತೆರೆ ನಟ, ಹಿರಿಯ ರಂಗಭೂಮಿ ಕಲಾವಿದ, ಕತೆಗಾರ, ಕುದುರೆಮುಖ ನಿವೃತ್ತ ನೌಕರ ವೇಣುಮಿತ್ರ ಕಾಸರಗೋಡು ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.
ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡಿದ 'ರಂಗ ಭಾಸ್ಕರ' ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ಶ್ರೀಯುತರು ಭಾಜನರಾಗಿದ್ದರು. ಸಾಗರದೀಪ ಸಿನೆಮಾದಲ್ಲೂ ಬಣ್ಣ ಹಚ್ಚಿ ಹಿರಿತೆರೆಯಲ್ಲೂ ಸೈ ಎನಿಸಿಕೊಂಡಿದ್ದರು.
ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಯೆಯ್ಯಾಡಿ ನಿವಾಸಿ. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಪತ್ನಿ ಮತ್ತು ಇಬ್ಬರು ಮಕ್ಕಳನ್ನು (ಪುತ್ರ ಮತ್ತು ಪುತ್ರಿ) ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق