ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಹಿಳೆ ಯುವಕನೊಂದಿಗೆ ಪರಾರಿ

ಮಹಿಳೆ ಯುವಕನೊಂದಿಗೆ ಪರಾರಿ

 


ಶಿವಮೊಗ್ಗ: ಶಿವಮೊಗ್ಗದ ಮಲ್ಲಿಗೆನ ಹಳ್ಳಿಯ 19 ವರ್ಷದ ಯುವಕನನ್ನು ಮದುವೆಯಾಗುವ ಉದ್ದೇಶದಿಂದ ಮಹಿಳೆ ತಮಿಳುನಾಡಿಗೆ ಕರೆದುಕೊಂಡು ಹೋಗಿದ್ದಾಳೆ.

ಮಹಿಳೆಯ ಗಂಡ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದು, ಯುವಕನೊಂದಿಗೆ ಗೆಳೆತನ ಬೆಳೆಸಿದ್ದಳು. ಮದುವೆಯಾಗಲು ತಮಿಳುನಾಡಿನಲ್ಲಿರುವ ತನ್ನ ತವರು ಮನೆಗೆ ಯುವಕನನ್ನು ಕರೆದುಕೊಂಡು ಹೋಗಿದ್ದಾಳೆ ಎಂದು ಹೇಳಲಾಗಿದೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಡಿಸೆಂಬರ್ 10 ರಂದು ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದ ಮಗ ವಾಪಸ್ ಬಂದಿಲ್ಲ.

ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಯುವಕನ ತಾಯಿ ತುಂಗಾನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


0 Comments

Post a Comment

Post a Comment (0)

Previous Post Next Post