ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಗೆ ಶರಣು

ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಗೆ ಶರಣು

 




ತುಮಕೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ.

ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರನ್ನು ನೀರಾವರಿ ಇಲಾಖೆ ಎಇಇ ರಮೇಶ್ (55), ಪತ್ನಿ ಮಮತಾ (45) ಮಗಳು ಶುಭ (25) ಎಂದು ಗುರುತಿಸಲಾಗಿದೆ.

ಒಮ್ನಿ ಕಾರಿನಲ್ಲಿ ಬಂದು ಇಡೀ ಕುಟುಂಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

0 تعليقات

إرسال تعليق

Post a Comment (0)

أحدث أقدم