ಬೆಂಗಳೂರು: ದ್ವಿಚಕ್ರ ವಾಹನ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಗುಜರಿ ವ್ಯಾಪಾರಿ ಮಣಿವಣ್ಣನ್ (40) ಎಂಬುವರು ಮೃತಪಟ್ಟ ಘಟನೆಯೊಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
'ನಾಗನಾಥಪುರ ನಿವಾಸಿ ಮಣಿವಣ್ಣನ್, ಸಂಬಂಧಿ ಜೊತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.ಹಿಂಬದಿ ಸವಾರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಪೊಲೀಸರು ಹೇಳಿದರು.
'ಹೊಸ ರಸ್ತೆಯ ನಾಗನಾಥಪುರ ಜಂಕ್ಷನ್‌ನಲ್ಲಿ ಶನಿವಾರ ತಡರಾತ್ರಿ ದ್ವಿಚಕ್ರ ವಾಹನಕ್ಕೆ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದ್ದು, ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಣಿವಣ್ಣನ್, ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಮಾಹಿತಿ ತಿಳಿಸಿದರು.
Post a Comment