ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಡುಪಿ ಜಿಲ್ಲಾ ಸಾರ್ವಜನಿಕ ಗ್ರಂಥಾಲಯಕ್ಕೆ ಬನ್ನಂಜೆ ಗೋವಿಂದಾಚಾರ್ಯರ ನಾಮಕರಣಕ್ಕೆ ಸರ್ಕಾರದ ಅಧಿಕೃತ ಆದೇಶ

ಉಡುಪಿ ಜಿಲ್ಲಾ ಸಾರ್ವಜನಿಕ ಗ್ರಂಥಾಲಯಕ್ಕೆ ಬನ್ನಂಜೆ ಗೋವಿಂದಾಚಾರ್ಯರ ನಾಮಕರಣಕ್ಕೆ ಸರ್ಕಾರದ ಅಧಿಕೃತ ಆದೇಶ

ಉಡುಪಿ ಶಾಸಕ ಕೆ ರಘುಪತಿ ಭಟ್ ಪ್ರಯತ್ನ


ಉಡುಪಿ: ನಗರದಲ್ಲಿ ಈಗಾಗಲೇ ಸುಮಾರು 4 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಸಾರ್ವಜನಿಕ ಗ್ರಂಥಾಲಯಕ್ಕೆ ಬಹುಶ್ರುತ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ವಿದ್ಯಾವಾಚಸ್ಪತಿ ಡಾ ಬನ್ನಂಜೆ ಗೋವಿದಾಚಾರ್ಯರ ಹೆಸರನ್ನಿಟ್ಟು ಗೌರವಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಈ ಬಗ್ಗೆ ಪ್ರಾಥಮಿಕ ಮತ್ರು ಪ್ರೌಢ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಅಧಿಕೃತ ಆದೇಶ ಪ್ರಕಟಿಸಿದ್ದಾರೆ.‌


ಈ ಬಗ್ಗೆ ಸ್ಥಳೀಯ ಶಾಸಕ ಕೆ ರಘುಪತಿ ಭಟ್ಟರು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಮಂತ್ರಿ ಬಿ ಸಿ ನಾಗೇಶ್ ಅವರಿಗೆ ಮನವಿ ಸಲ್ಲಿಸಿದ್ದರು. ಸದ್ಯದಲ್ಲೇ ಒಳಾಂಗಣ ವಿನ್ಯಾಸವನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.


ಈ ಬಗ್ಗೆ ಬನ್ನಂಜೆಯವರ ಕುಟುಂಬಸ್ಥರು, ಅಸಂಖ್ಯ ಅಭಿಮಾನಿಗಳು ಶಿಷ್ಯರು ರಾಜ್ಯ ಸರ್ಕಾರಕ್ಕೆ ಹಾಗೂ ಶಾಸಕ ಕೆ ರಘುಪತಿ ಭಟ್ಟರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم