ಪುತ್ತೂರು : ತಾಲೂಕಿನ ಕೊಳ್ತಿಗೆ ಗ್ರಾಮದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವಕ ಮೃತಪಟ್ಟ ಘಟನೆಯೊಂದು ಶುಕ್ರವಾರ ನಡೆದಿದೆ.
ಕೊಳ್ತಿಗೆ ಗ್ರಾಮದ ಕೆಮ್ಮಾರ ಎಂಬಲ್ಲಿ ಮುರಳೀಧರ ಎಸ್.ಪಿ. ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಮ್ಚಿನಡ್ಕ ನಿವಾಸಿ ಅವಿನಾಶ್ (24) ಎನ್ನುವ ಯುವಕ ಮೃತ ದುರ್ದೈವಿ.
ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹವನ್ನು ಕೆರೆಯಿಂದ ಮೇಲೆಕ್ಕೆತ್ತಿದ್ದರು. ಈ ಬಗ್ಗೆ ಬೆಳ್ಳಾರೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
إرسال تعليق