ಉಡುಪಿ: ಮಾನಸಿಕವಾಗಿ ಬೇಸತ್ತು ಕುಗ್ಗಿ ಹೋಗಿದ್ದ ಯುವಕ ದೇವಸ್ಥಾನವೊಂದರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉಡುಪಿ ಜಿಲ್ಲೆಯ ಪಾಂಡೇಶ್ವರದ ಯಡಬೆಟ್ಟು ನಿವಾಸಿ ಸುನೀಲ್ ಮೊಗವೀರ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಉಡುಪಿ ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಗಳವಾರ ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದಲ್ಲಿ ದರ್ಶನ ಪಡೆದ ಬಳಿಕ ಈತ, ಅಲ್ಲಿನ ದೇವಸ್ಥಾನದ ಕೆರೆಗೆ ಹಾಕಲಾಗಿದ್ದ ಕಬ್ಬಿಣದ ಬೇಲಿಯನ್ನು ದಾಟಿ ಹಾರಿದ್ದಾನೆ.
ಸ್ಥಳೀಯರು ಕೂಡಲೇ ನೆರವಿಗೆ ಬಂದರೂ ಆತನನ್ನು ಉಳಿಸಿಕೊಳ್ಳಲು ಆಗಿಲ್ಲ. ಕೂಲಿ ಕೆಲಸ ಮಾಡಿಕೊಂಡಿದ್ದ ಸುನೀಲ್, ಇತ್ತೀಚೆಗೆ ಕೆಲ ದಿನಗಳಿಂದ ಸರಿಯಾದ ಕೆಲಸವಿಲ್ಲದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಎನ್ನಲಾಗಿದೆ.
ಈ ಬಗ್ಗೆ ಕೋಟ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Post a Comment