ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಿತ್ತೂರ ಚನ್ನಮ್ಮ ಬಾಲಕಿಯರ ವಸತಿ ನಿಲಯದಲ್ಲಿ 19 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಕಿತ್ತೂರ ಚನ್ನಮ್ಮ ಬಾಲಕಿಯರ ವಸತಿ ನಿಲಯದಲ್ಲಿ 19 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

 



ಕಾರವಾರ: ಜೊಯಿಡಾ ತಾಲ್ಲೂಕಿನ ರಾಮನಗರದಲ್ಲಿರುವ ಕಿತ್ತೂರ ಚನ್ನಮ್ಮ ಬಾಲಕಿಯರ ವಸತಿ ನಿಲಯದಲ್ಲಿ 19 ವಿದ್ಯಾರ್ಥಿನಿಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ವಸತಿ ನಿಲಯವನ್ನು 'ನಿರ್ಬಂಧಿತ ವಲಯ' ಎಂದು ಘೋಷಿಸಲಾಗಿದೆ. 

ಸೋಮವಾರ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ಸೋಂಕಿತರಿಗೆ ವಸತಿ ನಿಲಯದ ಮೇಲಿನ ಮಹಡಿಯಲ್ಲಿ ಉಳಿದುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ತಾಲ್ಲೂಕು ಆರೋಗ್ಯಾಧಿಕಾರಿಗೆ ನಿರ್ದೇಶನ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ಎಲ್ಲ ವಿದ್ಯಾರ್ಥಿಗಳ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಬೇಕು. ವಸತಿ ನಿಲಯವನ್ನು ಪ್ರತಿದಿನ ಸ್ಯಾನಿಟೈಸ್ ಮಾಡಬೇಕು. ಸೋಂಕಿತರಿಗೆ ಜೊಯಿಡಾ ತಾಲ್ಲೂಕು ಆಸ್ಪತ್ರೆ ಮತ್ತು ರಾಮನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು' ಎಂದು ಸೂಚಿಸಿದರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم