ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಸಿಯೂಟದಲ್ಲಿ ಸತ್ತ ಹಲ್ಲಿ ಬಿದ್ದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಬಿಸಿಯೂಟದಲ್ಲಿ ಸತ್ತ ಹಲ್ಲಿ ಬಿದ್ದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

 


ಹಾವೇರಿ: ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಲ್ಲಿಯೊಂದು ಬಿದ್ದು 80ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆಯೊಂದು ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ತಾಂಡಾದ ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಲ್ಲಿ ಬಿದ್ದಿತ್ತು. ಈ ಆಹಾರವನ್ನು ಸೇವಿಸಿದ ಮಕ್ಕಳಿಗೆ ಹೊಟ್ಟೆನೋವು ಕಾಣಿಸಿಕೊಂಡಿತು.

ತಕ್ಷಣವೇ ಅವರನ್ನು ರಾಣೆಬೆನ್ನೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಎಲ್ಲ ಮಕ್ಕಳು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಷಯ ತಿಳಿದು ಶಾಲೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೋಷಕರು ಧಾವಿಸಿದ್ದರು. ಆಹಾರದಲ್ಲಿ ಹಲ್ಲಿ ಹೇಗೆ ಬಿದ್ದಿತು ಎಂಬುದು ಶಿಕ್ಷಕರಿಗೂ ಸಹ ಗೊತ್ತಾಗಿಲ್ಲ.

ಆದರೆ ಶಿಕ್ಷಕರ ನಿರ್ಲಕ್ಷ್ಯಕ್ಕೆ ಅಧಿಕಾರಿಗಳು, ಪೋಷಕರು ಕಿಡಿಕಾರಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದಾಗಿ ಶಿಕ್ಷಣ ಅಧಿಕಾರಿಗಳು ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم