ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರೀತಿಸಿ ಮದುವೆಯಾದ ಯುವತಿ ನೇಣು ಬಿಗಿದು ಆತ್ಮಹತ್ಯೆ ಗೆ ಶರಣು

ಪ್ರೀತಿಸಿ ಮದುವೆಯಾದ ಯುವತಿ ನೇಣು ಬಿಗಿದು ಆತ್ಮಹತ್ಯೆ ಗೆ ಶರಣು

 


ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ.

ಮದುವೆಯಾದ ನಾಲ್ಕು ದಿನಕ್ಕೆ ಯುವತಿ ಬಾಗೇಪಲ್ಲಿಯ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಅಟ್ಟಹಳ್ಳಿ ನಿವಾಸಿಯಾಗಿರುವ 25 ವರ್ಷದ ಯುವತಿ ಯಲಹಂಕದ ಬಾಗಲೂರು ಕ್ರಾಸ್ ನಿವಾಸಿಯಾಗಿರುವ ಯುವಕನನ್ನು ಪ್ರೀತಿಸಿದ್ದು, ನಾಲ್ಕು ದಿನಗಳ ಹಿಂದೆ ಮದುವೆಯಾಗಿದ್ದರು ಎನ್ನಲಾಗಿದೆ.

ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم