ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದಿನಿಂದ ಚಂಪಾಷಷ್ಠಿ ಮಹೋತ್ಸವ ಆರಂಭ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದಿನಿಂದ ಚಂಪಾಷಷ್ಠಿ ಮಹೋತ್ಸವ ಆರಂಭ



ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಮಂಗಳವಾರ ಕ್ಷೇತ್ರದ ಮೂಲ ಮೃತ್ತಿಕಾ ಪ್ರಸಾದ ವಿತರಣೆ ನಡೆಯಿತು.


ಕ್ಷೇತ್ರದ ಪ್ರಧಾನ ಅರ್ಚಕ ವೇ| ಮೂ| ಸೀತಾರಾಮ ಎಡಪಡಿತ್ತಾಯ ಅವರು ವಿವಿಧ ವೈಧಿಕ ವಿದಿವಿಧಾನಗಳೊಂದಿಗೆ ಮೂಲ ಪ್ರಸಾದ ತೆಗೆದರು.


ಆ ಬಳಿಕ ಪುರೋಹಿತರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು,ಅಧಿಕಾರಿಗಳು, ಸಿಬ್ಬಂದಿಗೆ ನೀಡಲಾಯಿತು. ಭಕ್ತರು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು. ಅಪರಾಹ್ನ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ ರಾಂ ಸುಳ್ಯ, ಸದಸ್ಯರಾದ ಪ್ರಸನ್ನ ದರ್ಬೆ, ಪಿಜಿಎಸ್‌ಎನ್‌ ಪ್ರಸಾದ್‌, ಲೋಕೇಶ್‌ ಬಾಳುಗೋಡು, ವನಜಾ ವಿ.ಭಟ್‌, ಶೋಭಾ ಗಿರಿಧರ್‌, ಇಒ ಡಾ| ನಿಂಗಯ್ಯ, ಎಇಒ ಪುಷ್ಪಲತಾ ಮುಂತಾದವರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم