ಪುತ್ತೂರು: ತಾಲೂಕಿನ ಕಾವು ಬುಶ್ರಾ ಆಂಗ್ಲಮಾಧ್ಯಮ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಅಬ್ದುಲ್ ಆಝೀಜ್ ಬುಶ್ರಾ ಧ್ವಜಾರೋಹಣ ನೆರವೇರಿಸಿ, ಭಾರತ ದೇಶದಲ್ಲಿ ಹುಟ್ಟಿದ ನಾವು ನಿಜವಾಗಲೂ ಭಾಗ್ಯವಂತರು,ಎಲ್ಲರಲ್ಲೂ ಸಮಾನತೆಯನ್ನು ಕಾಣುವ ದೇಶ ನಮ್ಮ ಭಾರತ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಂಸ್ಥೆಯ ಮುಖ್ಯಗುರುಗಳಾದ ಅಮರನಾಥ ಬಿ.ಪಿ ಮಾತಾನಾಡಿ ಪ್ರತಿಯೊಬ್ಬರಿಗೂ ಹಕ್ಕು ಇದೆ , ಮೂಲಭೂತ ಹಕ್ಕುಗಳ ಬಗ್ಗೆ ಅದರ ಜವಾಬ್ದಾರಿ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೈಲಾಸ್ ಕಾರ್ಯಕ್ರಮದ ಕುರಿತು ಮಾತಾನಾಡಿದರು.
ಕಾರ್ಯಕ್ರಮದಲ್ಲಿ ಯುವದಿನ ಅಂಗವಾಗಿ ಏರ್ಪಡಿಸಿದ್ದ ವಿವೇಕಾನಂದರ ಭಾವಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ತುಡರ್ ಯುವಕ ಮಂಡಲ(ರಿ) ನನ್ಯ ಕಾವು ಇವರು ನೀಡಿದ ಬಹುಮಾನವನ್ನು ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಬುಶ್ರಾ ವಿದ್ಯಾಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಕೋಶಾಧಿಕಾರಿ ಬಶೀರ್ ಕೌಡಿಚ್ಚಾರು, ಬದ್ರುದ್ದೀನ್, ಶಾಲಾ ಶಿಕ್ಷಕರು ಮತ್ತು ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿನಿ ನುಮಾ ಸಂಶುದ್ದೀನ್ ಕಾರ್ಯಕ್ರಮ ನಿರೂಪಿಸಿದರು. ಮುಜಾಮಿಲ್ ಜೆ ಕೆ ವಂದಿಸಿದರು,ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.
Post a Comment