ಹುಬ್ಬಳ್ಳಿ: ಹೆರಿಗೆಗಾಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಕೆ ಆ್ಯಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆಯೊಂದು ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ನಡೆದಿದೆ.
ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದ ದಿಲ್ಶಾದ್ ಬೇಗಮ್ ಹುಸೇನ್ ಸಾಬ್ ಡಂಬಳ ಎಂಬ ಗರ್ಭಿಣಿ ಹೆರಿಗೆ ನೋವಿನಿಂದ ಬಳಲುತ್ತಿದ್ದರು.
ಆ ತಕ್ಷಣ ಆ್ಯಂಬುಲೆನ್ಸ್ ಗೆ ಕರೆ ಮಾಡಿ ಅಲ್ಲಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಮಾರ್ಗ ಮಧ್ಯದಲ್ಲಿ ಅಣ್ಣಿಗೇರಿ ಪಟ್ಟಣ ಸಮೀಪ ದಿಲ್ಶಾದ್ ಬೇಗಮ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ-ಮಗು ಆರೋಗ್ಯವಾಗಿದ್ದು, ಅಣ್ಣಿಗೇರಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಆ್ಯಂಬುಲೆನ್ಸ್ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.
إرسال تعليق