ರಾಮನಗರ: ಎರಡು ಕಾರು ಮತ್ತು ಟಿಪ್ಪರ್ ಮಧ್ಯೆ ಡಿಕ್ಕಿ ಸಂಭವಿಸಿ ಆರು ಮಂದಿ ಸಾವನ್ನಪ್ಪಿ, 8 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಜಿಲ್ಲೆಯ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಎರಡು ಕಾರುಗಳು ಮತ್ತು ಒಂದು ಬೈಕ್ ಮೇಲೆ ಟಿಪ್ಪರ್ ಉರುಳಿ ಬಿದ್ದಿದೆಂದು ತಿಳಿದು ಬಂದಿದೆ. ಮೃತರನ್ನ ನಿಖಿತಾರಾಣಿ, ವೀಣಮ್ಮ, ಇಂದ್ರಕುಮಾರ್, ಕೀರ್ತಿಕುಮಾರ್, ಟಯೊಟಾ ಕಂಪನಿ ನೌಕರ ಶಿವಪ್ರಕಾಶ್ ಹಾಗೂ ಬೈಕ್ ನಲ್ಲಿದ್ದ ಜಿತಿನ್ ಬಿ ಜಾರ್ಜ್ ಎಂದು ಗುರುತಿಸಲಾಗಿದೆ.
ಎರಡು ಕಾರುಗಳಲ್ಲಿ ಹತ್ತು ಮಂದಿ ಪ್ರಯಾಣ ಮಾಡುತ್ತಿದ್ದರು. ಅಪಘಾತದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಜೆಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಅಡಿ ಸಿಲುಕಿ ಆರು ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಸ್ಥಳಕ್ಕೆ ಕುಂಬಳಗೋಡು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.
Post a Comment