ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಅಹ್ವಾನ

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಅಹ್ವಾನ

 


ಬೀದರ್ ; ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು. ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಉತ್ತೀರ್ಣರಾಗಿರಬೇಕು. ಹಾಗೆಯೇ 9ನೇ ತರಗತಿಯವರೆಗೆ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದು.

ಬೀದರ್ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿಯಿರುವ ಹಲವು ಹುದ್ದೆಗಳ ನೇಮಕಾತಿ ಪ್ರಕಟಿಸಲಾಗಿದೆ.

ಈ ವಿಭಾಗದಲ್ಲಿ 28 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 66 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 10ನೇ ತರಗತಿ ಪಾಸಾದ ಬೀದರ್ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ಹೆಸರು ಮತ್ತು ಒಟ್ಟು ಹುದ್ದೆಗಳು:
ಅಂಗನವಾಡಿ ಕಾರ್ಯಕರ್ತೆ- 28 ಹುದ್ದೆಗಳು
ಅಂಗನವಾಡಿ ಸಹಾಯಕಿ – 66 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ- 94


ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು.
ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಉತ್ತೀರ್ಣರಾಗಿರಬೇಕು. ಹಾಗೆಯೇ 9ನೇ ತರಗತಿಯವರೆಗೆ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದು.
10ನೇ ತರಗತಿಗಿಂತ ಹೆಚ್ಚಿನ ಶಿಕ್ಷಣ ಪಡೆದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.


ಅರ್ಜಿ ಸಲ್ಲಿಸುವಾಗ ನೀಡಬೇಕಾದ ದಾಖಲೆಗಳು:
-ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
-ವಾಸಸ್ಥಳ ದೃಢೀಕರಣ ಪತ್ರ.
-ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
-ಮೀಸಲಾತಿ ಇದ್ದರೆ, ಅದರ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ.
– ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
-ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಅದರ ಪ್ರಮಾಣ ಪತ್ರ.
-ಯೋಜನಾ ನಿರಾಶ್ರಿತರಾಗಿದ್ದಲ್ಲಿ ಅದರ ಪ್ರಮಾಣ ಪತ್ರ.
-ಅಂಗವಿಕಲರಾಗಿದ್ದಲ್ಲಿ ಅದರ ಪ್ರಮಾಣ ಪತ್ರ.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್‌ www.anganwadirecruitment.kar.nic.in ಗೆ ಭೇಟಿ ನೀಡಿ. ಅಲ್ಲಿ ಬೀದರ್ ಜಿಲ್ಲೆಯನ್ನು ಆಯ್ಕೆ ಮಾಡಿ ಅರ್ಜಿ ಭರ್ತಿ ಮಾಡಿ. ಅಲ್ಲದೆ ನೀವು ನೀಡಬೇಕಾದ ದಾಖಲೆಗಳನ್ನು ಅಪ್​ಲೋಡ್ ಮಾಡಿ. ಸಬ್​ಮಿಟ್​ ಬಟನ್​ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 01-01-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-01-2022


0 Comments

Post a Comment

Post a Comment (0)

Previous Post Next Post