ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ಶಿಕಾರಿಪುರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳ ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 20 ಅಂಗನವಾಡಿ ಕಾರ್ಯಕರ್ತೆಯರು ಮತ್ತು 68 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ವೆಬ್‍ಸೈಟ್ www.anganwadirecruit.kar.nic.in ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಕೆ ಪ್ರಾರಂಭ ದಿನ ಜ.13 ಹಾಗೂ ಅರ್ಜಿ ಸಲ್ಲಿಕೆಗೆ ಕಡೆಯ ದಿನ ಫೆ.13 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕುಗಳ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
إرسال تعليق