ದಾವಣಗೆರೆ : ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿ ನಿಟುವಳ್ಳಿ ಫಿರ್ಕಾ ಗ್ರಾಮ ಸಹಾಯಕರ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ತಹಶೀಲ್ದಾರ್ ಅವರು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿರುತ್ತಾರೆ.
ಅರ್ಜಿದಾರರು ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು, ಕನಿಷ್ಠ 25 ವರ್ಷ ವಯಸ್ಸಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು.
ವಿದ್ಯಾವಂತರಾಗಿರಬೇಕು, ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು. ಗ್ರಾಮಸಹಾಯಕ, ತಳವಾರರು, ತೋಟಿಗಳು, ನೀರುಗಂಟಿಗಳು, ವಾಲಿಕರ್ಸ್, ಮಹರ್ಸ್, ಬಾರಿಕರ್ಸ್, ನೀರಾಡಿಗಳು, ಬಲೂತಿದಾರ್ಸ್, ತಳಯಾರಿಸ್, ವೆಟಿಸ್, ಕುಲವಡಿಸ್, ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು.
ಭರ್ತಿ ಮಾಡಿದ ಅರ್ಜಿಯೊಂದಿಗೆ ಜನ್ಮ ದಿನಾಂಕ ದೃಢೀಕರಿಸಲು ಶಾಲಾ ವರ್ಗಾವಣೆ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಲಗತ್ತಿಸಬೇಕು.
ವಾಸಸ್ಥಳ ದೃಢೀಕರಣ ಪತ್ರ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ವ್ಯಾಸಂಗ ಪೂರೈಸಿದ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 20 ರೂ. ಸ್ಟಾಂಪ್ ಪೇಪರ್ ನಲ್ಲಿ ಸ್ವಯಂ ಘೋಷಣಾ ಪ್ರಮಾಣ ಪತ್ರ, ವಂಶವೃಕ್ಷ, ಒಪ್ಪಿಗೆ ಪ್ರಮಾಣಪತ್ರ (ಒಂದೇ ಕುಟುಂಬದವರಾಗಿದ್ದರೆ), ಚಾರಿತ್ರ್ಯದ ಬಗ್ಗೆ ಪೊಲೀಸ್ ವರದಿ ಸಲ್ಲಿಸಬೇಕು.
ಆಸಕ್ತಿಯುಳ್ಳವರು ಅಗತ್ಯ ದಾಖಲೆಗಳ ವಿವರಗಳನ್ನು ಜ.20 ರ ಸಂಜೆ 5-30 ರೊಳಗೆ ದಾವಣಗೆರೆ ತಾಲ್ಲೂಕು ಕಛೇರಿಗೆ ಅರ್ಜಿ ಸಲ್ಲಿಸಬೇಕು ಎಂದು ದಾವಣಗೆರೆ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
إرسال تعليق