ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

 


ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಅಧಿಸೂಚನೆ ಹೊರಡಿಸಿದ್ದು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿಎಆರ್/ಡಿಎಆರ್) (ಪುರುಷ) ಮತ್ತು ಸೇವೆಯಲ್ಲಿರುವವರು (ಮಿಕ್ಕುಳಿದ ಮತ್ತು ಸ್ಥಳೀಯ ವೃಂದದ) ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಹುದ್ದೆಗಳ ವಿವರ:

ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪುರುಷ ) (ಮಿಕ್ಕುಳಿದ ವೃಂದ) - 50 ಹುದ್ದೆ

ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇವೆಯಲ್ಲಿರುವವರಿಗೆ (ಮಿಕ್ಕುಳಿದ ವೃಂದ) - 10

ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪುರುಷ) (ಸ್ಥಳೀಯ ವೃಂದ) - 09

ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇಲೆಯಲ್ಲಿರುವವರಿಗೆ ( ಸ್ಥಳೀಯ ವೃಂದ ) 01

ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಪರಸ್ಥಳೀಯ ವೃಂದ ) - 01 ಸೇರಿದಂತೆ 71 ಹುದ್ದೆಗಳು


ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.500, ಎಸ್ಸಿ, ಎಸ್ಟಿ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250


ಅರ್ಜಿ ಸಲ್ಲಿಕೆ ವಿಧಾನ:

ಅರ್ಹ ಅಭ್ಯರ್ಥಿಗಳು ಆನ್ ಲೈನ್ (Online ) ಮೂಲಕವೇ https://recruitment.ksp.gov.in ನಲ್ಲಿ ಸಲ್ಲಿಸುವುದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.


ವಯೋಮಿತಿ:

ದಿನಾಂಕ 27-01-2022ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು. ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು. ಸೇವಾನಿರತ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆ ಇದೆ.


ವಿದ್ಯಾರ್ಹತೆ:

ಯುಜಿಸಿಯಿಂದ ಮಾನ್ಯತೆ ಪಡೆದಿರುವಂತ ಅಂಗೀಕೃತ ವಿಶ್ವವಿದ್ಯಾಲದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸುವ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.


ವೇತನ ಶ್ರೇಣಿ:

ರೂ.37,900 ರಿಂದ ರೂ.70,850 ಜೊತೆಗೆ ಪಿಂಚಣಿ ಸೌಲಭ್ಯ ಅನ್ವಯವಾಗಲಿದೆ.


ನೇಮಕಾತಿ ವಿಧಾನ:

ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೆಕು. ಇದಲ್ಲದೇ ಲಿಖಿತ ಪರೀಕ್ಷೆಯಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.


ಪ್ರಮುಖ ದಿನಾಂಕಗಳು

ದಿನಾಂಕ 28-12-2021ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ದಿನಾಂಕ 27-01-2022 ಅರ್ಜಿ ಸಲ್ಲಿಸಲು ಕೊನೆಯ ದಿನ

ದಿನಾಂಕ 29-01-2022 ಶುಲ್ಕವನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಪಾವತಿಸಲು ಕೊನೆಯ ದಿನ

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post