ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಳ್ಳಾರಿ; ವಿಮ್ಸ್‌ ವೈದ್ಯಕೀಯ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಬಳ್ಳಾರಿ; ವಿಮ್ಸ್‌ ವೈದ್ಯಕೀಯ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ



 ಬಳ್ಳಾರಿ; ವಿಮ್ಸ್ ವೈದ್ಯಕೀಯ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು , ಸುತ್ತ ಮುತ್ತಲಿನ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಬಳ್ಳಾರಿಯ ವಿಮ್ಸ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ 250 ವಿದ್ಯಾರ್ಥಿಗಳಿದ್ದು, ಇವರಲ್ಲಿ 21 ಮಂದಿಗೆ ಸೋಂಕು ದೃಢಪಟ್ಟಿದ್ದು , ಇತರ ವಿದ್ಯಾರ್ಥಿಗಳಲ್ಲೂ ಕೂಡ ಆತಂಕ ಸೃಷ್ಟಿಸಿದೆ.

ಸೋಂಕಿತ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು , ಹಾಸ್ಟೆಲ್ ನ ಇತರೇ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ.

ಉಳಿದಂತೆ ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم