ಬಂಟ್ವಾಳ; ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಪಾಣೆಮಂಗಳೂರಿನಲ್ಲಿ ಶನಿವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಬಂಟ್ವಾಳ ಸಜೀಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಎಂದು ಗುರುತಿಸಲಾಗಿದೆ.
ಪ್ರಗತಿಪರ ಕೃಷಿಕರಾಗಿದ್ದ ಇವರು, ಇಂದು ಬೆಳಿಗ್ಗೆ ಮನೆಯಿಂದ ಹೊರಟ ಅವರು ಪಾಣೆಮಂಗಳೂರು ಕಿರುಸೇತುವೆ ಬಳಿ ನೀರಿಗೆ ಹಾರಿದ್ದಾರೆ.
ಸ್ಥಳೀಯರು ಇದನ್ನು ಗಮನಿಸಿ ಮಾಹಿತಿ ನೀಡಿದ್ದು, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ
Post a Comment