ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದಿಗೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ 6 ತಿಂಗಳು ಕಂಪ್ಲೀಟ್

ಇಂದಿಗೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ 6 ತಿಂಗಳು ಕಂಪ್ಲೀಟ್

 


ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನಂತರ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದಿಗೆ 6 ತಿಂಗಳು ಪೂರೈಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸುತ್ತಿದ್ದಾರೆ.

ಜೊತೆಗೆ ಅವರ 62 ನೇ ಹುಟ್ಟು ಹಬ್ಬ ಕೂಡ ಇದ್ದು, ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.


ಸಿಎಂ ಸಾಧನಾ ಪುಸ್ತಕ ಲೋಕಾರ್ಪಣೆ:

ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಕಾರಣ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ವಿಧಾನಸೌಧದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಬಿಡುಗಡೆಗೊಳಿಸಿದರು..


0 Comments

Post a Comment

Post a Comment (0)

Previous Post Next Post