ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನೋವಾ ಕ್ರಿಸ್ಟಾ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂತ್ರಿ ಮಾಲ್ ಬಳಿ ನಡೆದಿದೆ.
ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ಓವರ್ ಸ್ಪೀಡ್ ಆಗಿ ಬಂದ ಚಾಲಕ ಡಿವೈಡರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಲ್ಲಿದ್ದ ಎರಡು ಏರ್ ಬ್ಯಾಗ್‍ಗಳು ಓಪನ್ ಆಗಿದೆ.
ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕನಿಗೆ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಹೈ ಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತನಿಖೆ ವೇಳೆ ಕಾರಿನಲ್ಲಿ ಮದ್ಯ ಬಾಟಲಿ ಪತ್ತೆಯಾಗಿದ್ದು, ಮದ್ಯ ಸೇವಿಸಿ ಕಾರು ಚಾಲನೆ ಮಾಡಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.
ಇಬ್ಬರನ್ನೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಮೆಡಿಕಲ್ ಟೆಸ್ಟ್ ಮಾಡಿಸುತ್ತಿದ್ದಾರೆ. ಈ ವೇಳೆ ಮದ್ಯ ಸೇವನೆ ಮಾಡಿರುವುದು ಕಂಡು ಬಂದಿದ್ದರೆ ಡ್ರಿಂಕ್ ಆಂಡ್ ಡ್ರೈವ್ ಕೇಸ್ ಅಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
Post a Comment