ಕುಷ್ಟಗಿ: ತಾಲ್ಲೂಕಿನ ಕುರುಬನಾಳ ಸೀಮಾಂತರದಲ್ಲಿ ನಡೆದ ಬೈಕ್‌ಗಳ ನಡುವೆ ಪರಸ್ಪರ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದು, ಇನ್ನೊಬ್ಬ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಕುರುಬನಾಳ ಗ್ರಾಮದ ಮಲ್ಲಪ್ಪ ದೇವೇಂದ್ರಪ್ಪ ಕರಕಪ್ಪನವರ (40) ಮೃತವ್ಯಕ್ತಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಯಲಬುರ್ಗಾ ತಾಲ್ಲೂಕಿನ ಮಾಟಲದಿನ್ನಿ ಕಡೆಯಿಂದ ಬಂದ ಇಲ್ಲಿಯ ಜೆಸ್ಕಾಂ ಕಾವಲುಗಾರ ಹುಸೇನ್‌ಸಾಬ್ ಶರ್ಫುದ್ದೀನ್ ಅವರ ಬೈಕ್ ಮಲ್ಲಪ್ಪ ಅವರ ಬೈಕ್‌ಗೆ ಡಿಕ್ಕಿ ಹೊಡೆದಿತ್ತು.
ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಕಳಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮಲ್ಲಪ್ಪ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಲಪ್ಪ ಅವರ ಪತ್ನಿ ನೀಡಿದ ದೂರಿನ ಪ್ರಕಾರ ಶರ್ಫುದ್ದೀನ್ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment