ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಎಂಟಿಸಿ ಬಸ್ ಮತ್ತು ಬೈಕ್ ಅಪಘಾತ ; ಸವಾರ ಸಾವು

ಬಿಎಂಟಿಸಿ ಬಸ್ ಮತ್ತು ಬೈಕ್ ಅಪಘಾತ ; ಸವಾರ ಸಾವು

 


ಬೆಂಗಳೂರು : ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸವಾರನಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಆತ ಸಾವನ್ನಪ್ಪಿರುವ ಘಟನೆಯೊಂದು ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌.

ಲಕ್ಷ್ಮಿದೇವಿನಗರ ನಿವಾಸಿಯಾಗಿರುವ ಸುರೇಶ್ ಬಾಬು ಮೃತ ದುದೈರ್ವಿಯಾಗಿದ್ದು, ಇಂದು ಬೆಳಗ್ಗೆ ಸುಮಾರು 6.30ರ ವೇಳೆ ದುರ್ಘಟನೆ ಸಂಭವಿಸಿದೆ‌. 

ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆ ಬಳಿ ಮೆಜೆಸ್ಟಿಕ್ ಕಡೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಏಕಾಏಕಿ ನಿಯಂತ್ರಣ ತಪ್ಪಿ ಮುಂದೆ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದ ಸುರೇಶ್ ಬಾಬುಗೆ ಡಿಕ್ಕಿ ಹೊಡೆದು ಬಸ್ ಫುಟ್‌ಪಾತ್ ಮೇಲೆ ಹತ್ತಿದೆ.

 ಗಂಭೀರವಾಗಿ ಗಾಯಗೊಂಡ ಸುರೇಶ್ ಬಾಬು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

0 تعليقات

إرسال تعليق

Post a Comment (0)

أحدث أقدم