ಮಂಡ್ಯ: ಹೊಸ ವರ್ಷದ ಮೊದಲ ಅಮವಾಸ್ಯೆ ದಿನವೇ ಬಸ್ ಮತ್ತು ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, 5 ಮಂದಿಗೆ ಗಾಯವಾಗಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕೆಂಪನಕೊಪ್ಪಲು ಗೇಟ್ ಬಳಿ ಬೆಳ್ಳೂರು ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ.
ಮೃತಪಟ್ಟವರನ್ನು ಕೊಡಗು ಮೂಲದವರು ಎನ್ನಲಾಗಿದೆ. ಕಾರಿನಲ್ಲಿ ನಾಲ್ಕು ಮಂದಿ ಇದ್ದು, ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ಮೃತಪಟ್ಟವರ ಶವ ರವಾನೆ ಮಾಡಲಾಗಿದ್ದು, ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸೋಮವಾರಪೇಟೆ ಮೂಲದ ಸುದೀಪ್ (35), ಶ್ರೀಜಾ (30) ಹಾಗೂ ತಂಗಮ್ಮ (55) ಮೃತ ದುರ್ದೈವಿಗಳು ಎನ್ನಲಾಗಿದೆ.
15 ವರ್ಷದ ಯುವತಿಯ ಸ್ಥಿತಿ ಚಿಂತಾಜನಕವಾಗಿದ್ದು, ಆದಿಚುಂಚನಗಿರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಚಾಲಕ ಹಾಗೂ ಬಸ್ ನಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ, ನಾಲ್ವರಿಗೂ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment