ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರು ಅಪಘಾತ; ಮಹಿಳೆಗೆ ಗಾಯ

ಕಾರು ಅಪಘಾತ; ಮಹಿಳೆಗೆ ಗಾಯ

 


ಶ್ರೀರಂಗಪಟ್ಟಣ: ತಾಲ್ಲೂಕಿನ ನಗುವನಹಳ್ಳಿ ಗೇಟ್‌ ಬಳಿ, ಫನ್‌ಫೋರ್ಟ್‌ ಅಮ್ಯೂಸ್‌ಮೆಂಟ್‌ ‍ಪಾರ್ಕ್‌ ಎದುರು ಭಾನುವಾರ ಕಾರು ಪಲ್ಟಿಯಾದ ಘಟನೆಯೊಂದು ನಡೆದಿದ್ದು, ಇದರಿಂದಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೈಸೂರಿನ ರಂಗೇಗೌಡ ಅವರ ಪತ್ನಿ ಸುಬ್ಬುಲಕ್ಷ್ಮೀ (56) ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕ ಅಪಾಯದಿಂದ ಪಾರಾಗಿದ್ದು, ಮೈಸೂರಿನಿಂದ ಪಟ್ಟಣದ ಕಡೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗುಚಿ ಬಿದ್ದಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು. ಈ ಬಗ್ಗೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم