ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರು ಮತ್ತು ಆಟೋ ಅಪಘಾತ; ಇಬ್ಬರು ಸಾವು, ಇಬ್ಬರಿಗೆ ಗಾಯ

ಕಾರು ಮತ್ತು ಆಟೋ ಅಪಘಾತ; ಇಬ್ಬರು ಸಾವು, ಇಬ್ಬರಿಗೆ ಗಾಯ

 


ಚಿತ್ರದುರ್ಗ - ಕಾರು ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿ ಮಹಿಳೆ ಹಾಗೂ ಮಗು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆಯೊಂದು ಹೊಸದುರ್ಗ ತಾಲ್ಲೂಕಿನ ನೀರಗುಂದ ಪೀಲಾಪುರ ಗೇಟ್ ಬಳಿ ನಡೆದಿದೆ.

ಮೃತರನ್ನು ಹೊನ್ನೆಕೇರಿ ಗೊಲ್ಲರಹಟ್ಟಿಯ ಕರಿಯಮ್ಮ (50) ಧನುಷ್ (3) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ರಾಜು, ಲತಾ ಎಂಬುವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತರೀಕೆರೆ ತಾಲೂಕಿನ ತೀರು ಮುರುಡಿ ದೇವಸ್ಥಾನಕ್ಕೆ ಹೋಗಿ ಜವಳ (ತಲೆ ಕೂದಲು) ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಾರಿನಲ್ಲಿದ್ದ ಪ್ರಯಾಣಿಕರು ಎಲ್ಲರೂ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم