ಚಿಕ್ಕಮಗಳೂರು: ಟೈರ್ ಸ್ಫೋಟಗೊಂಡು ಅದರಲ್ಲಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಸೇತುವೆ ಬಳಿ ನಡೆದಿದೆ.
ರಾಜಶೇಖರ್ ಮತ್ತು ಮಣಿಕಂಠ ಮೃತ ದುರ್ದೈವಿಗಳು.
ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಮತ್ತಿಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Post a Comment