ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಸ್ತೆ ಅಪಘಾತ; ಶಬರಿಮಲೆ ಯಾತ್ರಿಕ ಸಾವು

ರಸ್ತೆ ಅಪಘಾತ; ಶಬರಿಮಲೆ ಯಾತ್ರಿಕ ಸಾವು

 



ಚಿಕ್ಕಬಳ್ಳಾಪುರ: ತಾಲ್ಲೂಕಿನ ದೊಡ್ಡ ಪೈಲಗುರ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಬರಿಮಲೆ ಯಾತ್ರಿಕ 22 ವರ್ಷದ ದರೇಶ್ ಮೃತ ದುರ್ದೈವಿಯಾಗಿದ್ದಾರೆ‌. 

ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡು, ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಂಧ್ರಪ್ರದೇಶದ ಗುಂತಕಲ್ ಮೂಲದ ಐದು ಮಂದಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ವಾಪಸ್ಸು ಹಿಂತಿರುಗುವ ವೇಳೆ ಕಾರು ಅಪಘಾತಕ್ಕೀಡಾಗಿದೆ.

 ಇಂದು ಬೆಳಗ್ಗೆ 5 ಗಂಟೆ ಸಮಯದಲ್ಲಿ ಯಾತ್ರಿಗಳ ಕಾರು ಪಂಚರ್ ಆಗಿದ್ದು, ರಾಷ್ಟ್ರೀಯ ಹೆದ್ದಾರಿ ಬಳಿಯ ದೊಡ್ಡ ಪೈಲಗುರ್ಕಿ ಗ್ರಾಮದ ರಸ್ತೆ ಬದಿಯ ಪಂಚರ್ ಶಾಪ್ ನಲ್ಲಿ ಟೈರ್​​ ಬದಲಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. 

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರು ಹೊರಗಡೆ ಹಾರಿ ಬಿದ್ದಿದ್ದು, ವಿಷಯ ತಿಳಿದ ಪೇರೆಂಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم