ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಿಕ್ಕಮಗಳೂರು: ಅಭ್ಯರ್ಥಿಗಳಿಗೆ ಹಣ ಹಂಚಿಕೆ- ಕಾಂಗ್ರೆಸ್ ಆರೋಪ ತಳ್ಳಿಹಾಕಿದ ಜೆಡಿಎಸ್‌

ಚಿಕ್ಕಮಗಳೂರು: ಅಭ್ಯರ್ಥಿಗಳಿಗೆ ಹಣ ಹಂಚಿಕೆ- ಕಾಂಗ್ರೆಸ್ ಆರೋಪ ತಳ್ಳಿಹಾಕಿದ ಜೆಡಿಎಸ್‌


ಚಿಕ್ಕಮಗಳೂರು: ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಪರಾಭವಗೊಳಿಸಲು ಜೆಡಿಎಸ್ ಅಭ್ಯರ್ಥಿಗಳಿಗೆ ಹಣವನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರೂಬೆನ್ ಮೋಸಸ್ ಅವರ ಆರೋಪ ಸತ್ಯಕ್ಕೆ ದೂರವಾದ ವಿಚಾರವಾಗಿದೆ ಎಂದು ಜೆಡಿಎಸ್ ಅಲ್ಪಸಂಖ್ಯಾತರ ನಗರಾಧ್ಯಕ್ಷ ಸಿ.ಎಂ.ಮಹಮ್ಮದ್ ಇರ್ಷಾದ್ ಹೇಳಿದ್ದಾರೆ.

 

ಈ ಸಂಬಂಧ ಇಂದು ಹೇಳಿಕೆ ನೀಡಿರುವ ಅವರು ಸೋಲಿನ ಹತಾಶೆಯಿಂದ ಬೆಸತ್ತಿರುವ ರೂಬೆನ್ ಮೋಸಸ್ ಅವರು ದಾಖಲೆಗಳಿಲ್ಲದೇ ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತಾಗಿದೆ. ತಮ್ಮ ಬಳಿ ದಾಖಲೆಗಳಿದ್ದರೆ ಸಾಕ್ಷಿ ಸಮೇತ ಸಾಬೀತುಪಡಿಸಲಿ ಎಂದಿದ್ದಾರೆ.


ಇತ್ತೀಚೆಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಪ್ರಭಾವಿ ಮುಖಂಡರೊಬ್ಬರು ಅವರದೇ ಪಕ್ಷದ ಮುಂಚೂಣಿ ನಾಯಕರು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿ ಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಅದನ್ನು ಅರಿತು ತಮ್ಮ ಪಕ್ಷದಲ್ಲಿರುವ ವಿರೋಧಿ ಬಣವನ್ನು ಮೊದಲು ನೋಡಿಕೊಳ್ಳಿ ಆನಂತರ ಇನ್ನೊಬ್ಬರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಬರಲಿದೆ ಎಂದು ಹೇಳಿದ್ದಾರೆ.


ಗೌರಿಕಾಲುವೆ ವಾರ್ಡ್ ಮತದಾರರು ಹಣ ಹಾಗೂ ಹೆಂಡದ ರೂಪದಲ್ಲಿ ತಮ್ಮ ಮತಗಳನ್ನು ಚಲಾಯಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ರೂಬೆನ್ ಮೋಸಸ್ ಮತದಾರರಿಗೆ ಅವಮಾನ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದನ್ನು  ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಖಂಡಿಸುತ್ತದೆ ಎಂದಿದ್ದಾರೆ.


ಚುನಾವಣೆಗಳಲ್ಲಿ ಮತದಾರರ ಜನಾಭಿಪ್ರಾಯಕ್ಕೆ ಯಾವುದೇ ಅಭ್ಯರ್ಥಿಗಳು ತಲೆಬಾಗಲೇ ಬೇಕು. ಕಾಂಗ್ರೆಸ್ ಮುಖಂಡ ರೂಬೆನ್ ಮೋಸಸ್ ಅವರು ಸೋಲಿನ ಹತಾಶೆ ಹಾಗೂ ಮಾನಸಿಕವಾಗಿ ನೊಂದು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.


ಇಂದು ಹರಿಹರದಹಳ್ಳಿ ಗ್ರಾಮಸಭೆ

ಚಿಕ್ಕಮಗಳೂರು: ಹರಿಹರದಹಳ್ಳಿ ಗ್ರಾಮ ಪಂಚಾಯಿತಿಯ 2021-22ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮ ಸಭೆಯನ್ನು ಜ.12 ರಂದು ಪಂಚಾಯಿತಿ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷ ಹೆಚ್.ಜೆ.ಯಶವಂತ ರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.


ಹರಿಹರದಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಗ್ರಾಮಸ್ಥರು ಅಂದು ಬೆಳಿಗ್ಗೆ 10.30ಕ್ಕೆ ಗ್ರಾಮಸಭೆಯಲ್ಲಿ ಭಾಗವಹಿಬಹುದು ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಿ.ಲಕ್ಷ್ಮಣ್ ತಿಳಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم