ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಿಕ್ಕಮಗಳೂರು: ಕರ್ತಿಕೆರೆ ಗ್ರಾಮ ಪಂಚಾಯತ್‌ ಗ್ರಾಮಸಭೆ

ಚಿಕ್ಕಮಗಳೂರು: ಕರ್ತಿಕೆರೆ ಗ್ರಾಮ ಪಂಚಾಯತ್‌ ಗ್ರಾಮಸಭೆ


ಚಿಕ್ಕಮಗಳೂರು: ತಾಲ್ಲೂಕಿನ ಕರ್ತಿಕೆರೆ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ಕೋವಿಡ್ ನಿಯಮಗಳನ್ನು ಅನುಸರಿಸಿ 2021-22 ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮಸಭೆ ಗುರುವಾರ ನಡೆಯಿತು.


ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಬಿ. ಮೋಹನ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸರ್ಕಾರದಿಂದ ಬರುವ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.


ಎನ್‍ಆರ್‍ಇಜಿ ಯೋಜನೆ ಸೇರಿದಂತೆ ಗ್ರಾಮಗಳ ಅಭಿವೃದ್ಧಿಗೆ ಸರ್ಕಾರದಿಂದ ಬರುವ ಅನುದಾನಗಳನ್ನು ಉಪಯೋಗಿಸಿಕೊಂಡು ಗ್ರಾಪಂನ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು.


ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬದು ನಿರ್ಮಾಣ, ಅಡಿಕೆ ತೋಟ ನಿರ್ಮಾಣ, ಎರೆಹುಳು ತೊಟ್ಟಿ ನಿರ್ಮಾಣ ಹಾಗೂ ಕೃಷಿ ಹೊಂಡಾ ಸೇರಿದಂತೆ ವಿವಿಧ ಸೌಲಭ್ಯ ಪಂಚಾಯಿತಿಯಿಂದ ಒದಗಿಸಲಾಗುವುದು ಎಂದರು.


ಸಹಾಯಕ ಕೃಷಿ ಅಧಕಾರಿ ಪ್ಲೇವಿಯನ್ ರೋಡ್ರಿಕ್ ಮಾತನಾಡಿ ಗ್ರಾಮಸಭೆಯಲ್ಲಿ ಅರ್ಥಪೂರ್ಣ ಚರ್ಚೆಗಳು ನಡೆದಿವೆ. ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.


ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಹೇಮಾವತಿ ಕೃಷ್ಣರಾಜ್ ಅರಸ್, ಸದಸ್ಯರುಗಳಾದ ಎಂ.ಡಿ.ನಾಗೇಶ್, ಚಂದ್ರಶೇಖರ ರಾಜ್ ಅರಸ್, ಕೆ.ಆರ್. ಗಣೇಶ್‍ರಾಜ್ ಅರಸ್, ಶ್ರೀಮತಿ ಆರ್.ಎಲ್.ಭಾಗ್ಯ, ಪಾರ್ವತಮ್ಮ, ರೇಣುಕ, ನೇತ್ರಾ, ರೇಖಾ, ಲೋಕೇಶ್, ಯತೀಶ್ ಕೆ.ಪಿ.ಸೌಮ್ಯ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕೆ.ಆರ್.ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post